ಎಚ್‌ಡಿಎಫ್‌ಸಿ ಬ್ಯಾಂಕ್ ತನ್ನ “ಪರಿವರ್ತನ್ ಶೈಕ್ಷಣಿಕ ಬಿಕ್ಕಟ್ಟಿನ ವಿದ್ಯಾರ್ಥಿವೇತನ ಬೆಂಬಲ (ಇಸಿಎಸ್‌ಎಸ್)” ಯೋಜನೆಯಡಿ 2024-25ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಈ ಯೋಜನೆಯ ಉದ್ದೇಶ, ಸಮಾಜದ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಭಾವಂತ ಮತ್ತು ಅಗತ್ಯವಿರುವ ವಿದ್ಯಾರ್ಥಿಗಳನ್ನು ಬೆಂಬಲಿಸುವುದು.

ಯಾರಿಗೆಷ್ಟು ವಿದ್ಯಾರ್ಥಿವೇತನ?
- 1 ರಿಂದ 6ನೇ ತರಗತಿಗೆ – ₹15,000
- 7 ರಿಂದ 12ನೇ ತರಗತಿ, ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ – ₹18,000
- ಸಾಮಾನ್ಯ ಪದವಿಪೂರ್ವ ಕೋರ್ಸ್‌ಗಳಿಗೆ – ₹30,000
- ವೃತ್ತಿಪರ ಪದವಿಪೂರ್ವ ಕೋರ್ಸ್‌ಗಳಿಗೆ – ₹50,000
- ಸಾಮಾನ್ಯ ಸ್ನಾತಕೋತ್ತರ ಕೋರ್ಸ್‌ಗಳಿಗೆ – ₹35,000
- ವೃತ್ತಿಪರ ಸ್ನಾತಕೋತ್ತರ ಕೋರ್ಸ್‌ಗಳಿಗೆ – ₹75,000
ಯಾವೆಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು?
ಈ ಯೋಜನೆಗೆ 1 ರಿಂದ 12ನೇ ತರಗತಿ, ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್ ಮತ್ತು ಪದವಿ ಪೂರ್ವ, ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಖಾಸಗಿ, ಸರ್ಕಾರಿ ಅಥವಾ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರಬೇಕು.
ಅರ್ಜಿ ಸಲ್ಲಿಸಲು ಅರ್ಹತೆಗಳೇನು?
- ವಿದ್ಯಾರ್ಥಿಗಳು ಭಾರತೀಯ ಶಾಲೆಗಳು ಅಥವಾ ಕಾಲೇಜುಗಳಲ್ಲಿ ಓದುತ್ತಿರಬೇಕು.
- ಕಳೆದ ಶೈಕ್ಷಣಿಕ ಸಾಲಿನಲ್ಲಿ ಕನಿಷ್ಠ 55% ಅಂಕಗಳನ್ನು ಪಡೆದಿರಬೇಕು.
- ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಹೆಚ್ಚು ಇರಬಾರದು.
- ಬಿಕ್ಕಟ್ಟಿನಿಂದ ಬಳಲುತ್ತಿರುವ ಕುಟುಂಬಗಳಿಗೆ ಆದ್ಯತೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಪಾಸ್ಪೋರ್ಟ್ ಸೈಜ್ ಫೋಟೋ
- 2023-24ನೇ ಸಾಲಿನ ಅಂಕಪಟ್ಟಿ
- ವಿಳಾಸ ಮತ್ತು ಗುರುತಿನ ಪುರಾವೆ (ಆಧಾರ್ ಕಾರ್ಡ್/ವೋಟರ್ ಐಡಿ/ಚಾಲನಾ ಪರವಾನಗಿ)
- 2024-25ನೇ ಸಾಲಿನ ಪ್ರವೇಶ ಪತ್ರ
- ಬ್ಯಾಂಕ್ ಪಾಸ್‌ಬುಕ್
- ಆದಾಯ ಪ್ರಮಾಣಪತ್ರ (2.5 ಲಕ್ಷಕ್ಕಿಂತ ಕಡಿಮೆ)
- ಕುಟುಂಬ/ವೈಯಕ್ತಿಕ ಬಿಕ್ಕಟ್ಟು ಪ್ರಮಾಣಪತ್ರ
ಅರ್ಜಿ ಸಲ್ಲಿಸುವ ವಿಧಾನ:
ವಿದ್ಯಾರ್ಥಿಗಳು ಇಲ್ಲಿ ಅಥವಾ ಇಲ್ಲಿ ಲಾಗಿನ್ ಆಗಿ. ಹೊಸ ಖಾತೆಯನ್ನು ರಚಿಸಿ, ನಿಮಗೆ ತಾತ್ಕಾಲಿಕ ಅಪ್ಲಿಕೇಶನ್ ಐಡಿ ಮತ್ತು ಪಾಸ್‌ವರ್ಡ್ ಸೃಷ್ಟಿಸಿ, ಡ್ಯಾಶ್‌ಬೋರ್ಡ್‌ಗೆ ಲಾಗಿನ್ ಆಗಿ. ಅರ್ಜಿಯನ್ನು ಸೂಕ್ತವಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ, ಹಾಗೂ ನಿಯಮಗಳು ಮತ್ತು ಷರತ್ತುಗಳನ್ನು ಒಪ್ಪಿಕೊಂಡು ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 4 ಆಗಿದ್ದು, ವಿದ್ಯಾರ್ಥಿಗಳು ಶೀಘ್ರವಾಗಿ ಅರ್ಜಿ ಸಲ್ಲಿಸಲು ಒತ್ತಾಯಿಸಲಾಗಿದೆ.
ಈ ವಿದ್ಯಾರ್ಥಿವೇತನ ಕಾರ್ಯಕ್ರಮವು ಅಗತ್ಯವಿರುವ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅತ್ಯಂತ ಪರಿಣಾಮಕಾರಿ ನೆರವಾಗಲಿದೆ
- ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆ 2000 ಹಣ ಈ ದಿನ ಬಿಡುಗಡೆ, ಈ ರೀತಿ ನಿಮ್ಮ ಹೆಸರು ಚೆಕ್ ಮಾಡಿ - June 25, 2025
- ಇ-ಹಾಜರಾತಿ ಕಡ್ಡಾಯ: ಶಾಲಾ ಮಕ್ಕಳಿಗೆ ನವೀನ ತಂತ್ರಜ್ಞಾನ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೆ! - June 25, 2025
- SSLC, ITI ಪಾಸಾದವರಿಗೆ ಸರ್ಕಾರಿ ಉದ್ಯೋಗ, ತಿಂಗಳಿಗೆ 29,200 ವರೆಗೆ ಸಂಬಳ..!! ಅರ್ಜಿ ಹೇಗೆ ಹಾಕಬೇಕು ಗೊತ್ತಾ? - June 25, 2025
Varsha H.M
Iam varsha HM