ನಮಸ್ಕಾರ ಸ್ನೇಹಿತರೇ! ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಬೋರ್ ವೆಲ್‌ಗಳು ಕುಡಿಯುವ ನೀರಿನ ಪ್ರಮುಖ ಮೂಲವಾಗಿದ್ದು, ಕೃಷಿ ಚಟುವಟಿಕೆಗಳಲ್ಲೂ ಪ್ರಮುಖ ಪಾತ್ರ ವಹಿಸುತ್ತಿವೆ. ಹೀಗಾಗಿ, ರೈತರು ಬೋರ್ ವೆಲ್ ಗಳನ್ನು ಅಳವಡಿಸಲು ಬಂಡವಾಳದ ಅಗತ್ಯವಿರುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರವು ‘ಗಂಗಾ ಕಲ್ಯಾಣ ನೀರಾವರಿ ಯೋಜನೆ’ ಮೂಲಕ ಆರ್ಥಿಕ ನೆರವು ನೀಡುತ್ತಿದೆ.
ಯೋಜನೆಯ ಉದ್ದೇಶ: ಈ ಯೋಜನೆಯ ಮುಖ್ಯ ಉದ್ದೇಶ ರೈತರಿಗೆ ಬೋರ್ ವೆಲ್ ಕೊರೆಸಿ ನೀರಾವರಿ ಸೌಲಭ್ಯ ಒದಗಿಸುವುದು. ಇದರಿಂದ ರೈತರು ತೋಟಗಾರಿಕೆ ಬೆಳೆಗಳನ್ನು ಬೆಳೆಸಿ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಬಹುದು.
ಯಾರೆಲ್ಲಾ ಅರ್ಹರು?
ಈ ಯೋಜನೆಗೆ ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಪ್ರ-1, 2ಎ, 3ಎ, ಮತ್ತು 3ಬಿ ವರ್ಗದ ರೈತರು ಅರ್ಹರಾಗಿದ್ದಾರೆ. ಆದರೂ, ಅರ್ಜಿದಾರರ ಬಳಿ ಕನಿಷ್ಠ 2 ಎಕರೆ ಮತ್ತು ಗರಿಷ್ಠ 5 ಎಕರೆ ಹೊಲವಿರುವುದು ಅಗತ್ಯ.
ಅಗತ್ಯ ದಾಖಲಾತಿಗಳು:
- ಆಧಾರ್ ಕಾರ್ಡ್
- ಪಡಿತರ ಚೀಟಿ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಸಣ್ಣ ಮತ್ತು ಅತಿ ಸಣ್ಣ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಪಹಣಿ ಹಾಗೂ FRUITS ID
ಅರ್ಜಿ ಸಲ್ಲಿಸಲು ಲಭ್ಯವಿರುವ ನಿಗಮಗಳು:
- ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
- ಉಪ್ಪಾರ ಅಭಿವೃದ್ಧಿ ನಿಗಮ
- ಮರಾಠ ಅಭಿವೃದ್ಧಿ ನಿಗಮ
- ವಿಶ್ವಕರ್ಮ ಅಭಿವೃದ್ಧಿ ನಿಗಮ
- ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
- ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ
- ಸವಿತಾ ಸಮಾಜ ಅಭಿವೃದ್ಧಿ ನಿಗಮ
- ಅಲೆಮಾರಿ, ಅರೆ-ಅಲೆಮಾರಿ ಅಭಿವೃದ್ಧಿ ನಿಗಮ
- ಒಕ್ಕಲಿಗ ಅಭಿವೃದ್ಧಿ ನಿಗಮ
ಅರ್ಜಿ ಸಲ್ಲಿಸುವ ಸ್ಥಳಗಳು:
ಅರ್ಜಿ ಸಲ್ಲಿಸಲು ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳನ್ನು ಭೇಟಿ ಮಾಡಬಹುದು.
ಹೀಗಾಗಿ, ಬೋರ್ ವೆಲ್ ಕೊರೆಸಲು ಯೋಜನೆಯ ಸದುಪಯೋಗವನ್ನು ಪಡೆದು ನೀರಾವರಿ ಸೌಲಭ್ಯವನ್ನು ಹೆಚ್ಚಿಸಿ, ಕೃಷಿಯಲ್ಲಿ ಉತ್ತಮ ಆದಾಯ ಗಳಿಸಿಕೊಳ್ಳಿ.
ಇನ್ನಷ್ಟು ಮಾಹಿತಿಗಾಗಿ ‘ಕನ್ನಡ ನ್ಯೂಸ್ ಲೈವ್’ ಫಾಲೋ ಮಾಡಿ!