ರಾಜ್ಯದ ರೈತರಿಗೆ ಮತ್ತೊಂದು ಗುಡ್‌ ನ್ಯೂಸ್! ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ಗಳ ಸ್ಥಾಪನೆಗೆ ಅರ್ಜಿ ಆಹ್ವಾನ.

ಹೈಟೆಕ್ ಹಾರ್ವೆಸ್ಟರ್ ಹಬ್ಗಳನ್ನು ಅನುಷ್ಟಾನ ಮಾಡಲು ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು, ಸೇವಾದಾರ ಸಂಸ್ಥೆಗಳು, ವೈಯಕ್ತಿಕ ಫಲಾನುಭವಿಗಳು ಹಾಗೂ ನೊಂದಾಯಿತ ಸಂಘ ಸಂಸ್ಥೆಗಳು ಎಫ್ಪಿಓ ಸಂಸ್ಥೆಗಳು ಯೋಜನೆಗೆ ಅರ್ಹರಾಗಿದ್ದು, ಆಸಕ್ತ ರೈತರು ಸಂಬಂಧಿಸಿದ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸೆ.24 ರೊಳಗಾಗಿ ಅರ್ಜಿ ಸಲ್ಲಿಸಬಹುದು.

Agriculture Department invites applications for setting up Hi-Tech Harvester Hubs
Agriculture Department invites applications for setting up Hi-Tech Harvester Hubs

ಕೃಷಿ ಚಟುವಟಿಕೆಗಳಿಗೆ ಆಧುನಿಕ ತಂತ್ರಜ್ಞಾನವನ್ನು ಜಾರಿ ಮಾಡುತ್ತಿದ್ದಂತೆ, ಹೈಟೆಕ್ ಹಾರ್ವೆಸ್ಟರ್ ಹಬ್ಗಳ ಸ್ಥಾಪನೆಗಾಗಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಂ. ಸೋಮಸುಂದರ ಅವರು ಯೋಜನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ್ದಾರೆ. ಈ ಹಬ್‌ಗಳು, ರೈತರ ಬೆಳೆ ಕಟಾವು ಪ್ರಕ್ರಿಯೆಯನ್ನು ಸುಲಭಗೊಳಿಸಿ, ಹೆಚ್ಚಿನ ಸಮಯ ಮತ್ತು ಶ್ರಮದ ಉಳಿತಾಯ ಮಾಡಲಿವೆ.

ಯೋಜನೆಯ ಮುಖ್ಯಾಂಶಗಳು:

  • ಅರ್ಜಿ ಆಹ್ವಾನ: ರೈತರು, ಕ್ರಿಯಾಶೀಲ ಕೃಷಿ ಯಂತ್ರಧಾರೆ ಕೇಂದ್ರಗಳು, ಸೇವಾದಾರ ಸಂಸ್ಥೆಗಳು, ವೈಯಕ್ತಿಕ ಫಲಾನುಭವಿಗಳು, ಮತ್ತು ಎಫ್ಪಿಓ ಸಂಸ್ಥೆಗಳು ಸೆಪ್ಟೆಂಬರ್ 24 ರೊಳಗಾಗಿ ಸಂಬಂಧಿಸಿದ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದು.
  • ಸಹಾಯಧನ: ಸಾಮಾನ್ಯ ವರ್ಗದ ರೈತರಿಗೆ ಶೇ.50 ರಷ್ಟು (ಅತಿ ಹೆಚ್ಚು ರೂ.40 ಲಕ್ಷ), ಪರಿಶಿಷ್ಟ ಜಾತಿ/ಪಂಗಡದ ರೈತರಿಗೆ ಶೇ.70 ರಷ್ಟು, ಮತ್ತು ಸಂಘ-ಸಂಸ್ಥೆಗಳಿಗೆ (ಎಫ್ಪಿಓ ಸೇರಿ) ಗರಿಷ್ಠ ರೂ.50 ಲಕ್ಷ ಸಹಾಯಧನ ನೀಡಲಾಗುತ್ತದೆ.
  • ಕೋಂಬೊ ಹಾರ್ವೆಸ್ಟರ್ ಹಬ್: ಕಂಬೈಡ್ ಹಾರ್ವೆಸ್ಟರ್ ಮತ್ತು ಶುಗರ್ಕೇನ್ ಹಾರ್ವೆಸ್ಟರ್ ಗಳನ್ನು ಒಳಗೊಂಡ “ಕೋಂಬೊ ಹಾರ್ವೆಸ್ಟರ್ ಹಬ್” ಗೆ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಟ್ರಸ್ಟ್ಗಳು, ಎಫ್ಪಿಓ, ಮತ್ತು ಸಂಘ-ಸಂಸ್ಥೆಗಳು ಅರ್ಹವಾಗಿರುತ್ತವೆ.
  • ಅರ್ಹತೆ: 6-9 ವರ್ಷಗಳ ಕಾಲ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಮತ್ತು ಲೆಕ್ಕ-ಪತ್ರ, ಯಂತ್ರೋಪಕರಣಗಳನ್ನು ಸರಿಯಾಗಿ ತಪಾಸಣೆಗೆ ಹಾಜರುಪಡಿಸಿದ ಸಂಸ್ಥೆಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
  • ಮಾಹಿತಿ: ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕರೆ ನೀಡಲಾಗಿದೆ.

ಈ ಯೋಜನೆಯು, ರೈತರಿಗೆ ಹೆಚ್ಚು ಆದಾಯ ಒದಗಿಸಲು, ಹಾಗೂ ಕೃಷಿ ಕಾರ್ಯಗಳಲ್ಲಿ ತಂತ್ರಜ್ಞಾನವನ್ನು ಹೆಚ್ಚು ಬಳಸುವ ನಿಟ್ಟಿನಲ್ಲಿ ಕೃಷಿ ಚಟುವಟಿಕೆಗಳನ್ನು ವೇಗವಾಗಿ ಪೂರ್ಣಗೊಳಿಸಲು ನೆರವಾಗಲಿದೆ.

ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಮೊ.8277934298 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

One thought on “ರಾಜ್ಯದ ರೈತರಿಗೆ ಮತ್ತೊಂದು ಗುಡ್‌ ನ್ಯೂಸ್! ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ಗಳ ಸ್ಥಾಪನೆಗೆ ಅರ್ಜಿ ಆಹ್ವಾನ.

Leave a Reply

Your email address will not be published. Required fields are marked *