ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಊರಿಗೆ ತೆರಳುವವರಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದ್ದು, ಈ ಬಾರಿ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ಹಾಗೂ ಹೊರರಾಜ್ಯಗಳಿಗೆ 1,500 ಹೆಚ್ಚುವರಿ ಬಸ್‌ಗಳು ಸಂಚಾರ ನಡೆಸಲಿವೆ. ಪ್ರತಿ ವರ್ಷದಂತೆ ಈ ಬಾರಿಯೂ ಪ್ರಯಾಣಿಕರ ಅನುಕೂಲಕ್ಕಾಗಿ ಈ ವ್ಯವಸ್ಥೆ ಮಾಡಲಾಗಿದೆ. ವಿಶೇಷವಾಗಿ ಬಸ್ ಟಿಕೆಟ್ ದರದಲ್ಲಿಯೂ ರಿಯಾಯಿತಿ ನೀಡಲಾಗಿದ್ದು, ಇದು ಪ್ರಯಾಣಿಕರ ಖರ್ಚು ಕಡಿಮೆ ಮಾಡಲು ಸಹಾಯಮಾಡಲಿದೆ.
ಮುಖ್ಯಾಂಶಗಳು:
- ಹೆಚ್ಚುವರಿ ಬಸ್ ಸೇವೆಗಳು: ಸೆಪ್ಟೆಂಬರ್ 5 ರಿಂದ 8 ರವರೆಗೆ 1,500 ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ.
- ಟಿಕೆಟ್ ದರಗಳಲ್ಲಿ ರಿಯಾಯಿತಿ: ಹೊಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ಗಳನ್ನು ಒಟ್ಟಿಗೆ ಕಾಯ್ದಿರಿಸಿದರೆ 10% ರಿಯಾಯಿತಿ.
ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಬೇರೆಬೇರೆ ಸ್ಥಳಗಳಿಗೆ ಬಸ್‌ಗಳು: ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ (ಮೆಜೆಸ್ಟಿಕ್) ಧರ್ಮಸ್ಥಳ, ಶಿವಮೊಗ್ಗ, ಮಂಗಳೂರು, ಬೆಳಗಾವಿ, ಗೋಕರ್ಣ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.
ಸ್ಯಾಟಲೈಟ್ ನಿಲ್ದಾಣದಿಂದ ಮೈಸೂರು ಮಾರ್ಗದ ಬಸ್‌ಗಳು: ಮೈಸೂರು, ಕುಶಾಲನಗರ, ಮಡಿಕೇರಿ ಮುಂತಾದ ಸ್ಥಳಗಳಿಗೆ ಮೈಸೂರು ರಸ್ತೆಯ ಸ್ಯಾಟಲೈಟ್ ನಿಲ್ದಾಣದಿಂದ ಬಸ್‌ಗಳು ಸಂಚರಿಸಲಿವೆ.
ಶಾಂತಿನಗರ ನಿಲ್ದಾಣದಿಂದ ತಮಿಳುನಾಡು, ಕೇರಳದ ಬಸ್‌ಗಳು: ಶಾಂತಿನಗರ ಬಸ್ ನಿಲ್ದಾಣದಿಂದ ಮಧುರೈ, ಚೆನ್ನೈ, ಎರ್ನಾಕುಲಂ ಮುಂತಾದ ಸ್ಥಳಗಳಿಗೆ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
ಶೇಕಡಾ 10 ರಷ್ಟು ರಿಯಾಯಿತಿ:
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದರೆ 5% ರಿಯಾಯಿತಿ ಸಿಗುತ್ತದೆ. ಜೊತೆಗೆ, ಹೋಗುವ ಮತ್ತು ಬರುವ ಟಿಕೆಟ್‌ಗಳನ್ನು ಒಟ್ಟಿಗೆ ಕಾಯ್ದಿರಿಸಿದಾಗ 10% ರಿಯಾಯಿತಿ ದೊರಕುತ್ತದೆ.
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವಿಶೇಷ ಬಸ್‌ಗಳು: ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಹಾವೇರಿ ಮುಂತಾದ ಪ್ರದೇಶಗಳಿಂದ 220 ಹೆಚ್ಚುವರಿ ಬಸ್‌ಗಳನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಕಾರ್ಯಾಚರಣೆ ಮಾಡಲಿದೆ.
ಸಾರ್ವಜನಿಕರು ಈ ವಿಶೇಷ ಬಸ್ ಸೇವೆಯನ್ನು ಸದುಪಯೋಗ ಪಡಿಸಿಕೊಂಡು, ಸುಖಕರ ಹಾಗೂ ಸುರಕ್ಷಿತ ಪ್ರಯಾಣವನ್ನು ಆನಂದಿಸಬೇಕು ಎಂದು KSRTC ಮತ್ತು NWKRTC ಮನವಿ ಮಾಡಿದೆ.